Karnataka News
*ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು: ಸ್ವಯಂ ಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.
ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ವಕೀಲರಿಂದಲೂ ಹೈಕೋರ್ಟ್ ಮಾಹಿತಿ ಪಡೆದುಕೊಂಡಿದೆ. ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿದೆ.




