Karnataka News

*ಸಿಎಂ, ಡಿಸಿಎಂ, ಅಧಿಕಾರಿಗಳ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಿಎಂ, ಡಿಸಿಎಂ ಹಾಗೂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಆರ್ ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಯಾವುದೇ ಎಫ್ ಐ ಆರ್ ದಾಖಲಾಗಿಲ್ಲ. ಈ ನಡುವೆ ಸ್ನೇಹಮಯಿ ಕೃಷ್ಣ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೆ ಎ ಎಸ್ ಅಧಿಕಾರಿಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Home add -Advt

ರಾಜಕೀಯ ಪ್ರಚಾರದ ಲಾಭಕ್ಕಾಗಿ ನಡೆಸಿದ ಕಾರ್ಯಕ್ರಮದಲ್ಲಿ ಆರ್ ಸಿಬಿ ತಂಡದ ಆಟಗಾರರನ್ನು ವಿಧಾನಸೌಧದ ಮುಂಭಾಗ ಸನ್ಮಾನ್ನಿಸುವ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವ ದುಡುಕಿನ ನಿರ್ಧಾರ ಕೈಗೊಂಡು ದುರಂತಕ್ಕೆ ಕಾರಣರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಪದಾಧಿಕಾರಿಗಳು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 106ಅಡಿ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Related Articles

Back to top button