
ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್ ಹಜಾರೆ ಪಂದ್ಯಕ್ಕೆ ಅವಕಾಶವಿಲ್ಲ
ಪ್ರಗತಿವಾಹಿನಿ ಸುದ್ದಿ: ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯ ಸುದ್ದಿ. ನಾಳೆ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯಾವಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಕಾಶವಿಲ್ಲ ಎಂದು ಬೆಂಗಳುರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮ್ಯಾಚ್ ನಡೆಯುವ ನಿರೀಕ್ಷೆ ಇತ್ತು. ಕಾಲ್ತುಳಿತ ಪ್ರಕರಣದ ಬಳಿಕ ಇದೇ ಮೊದಲ ಬಾರಿಗೆ ನಾಳೆ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಕೊನೇ ಕ್ಷಣದಲ್ಲಿ ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮ್ಯಾಚ್ ಗೆ ಅವಕಾಶವಿಲ್ಲ ಎಂದು ತಿಳಿದುಬಂದಿದೆ.
ತನಿಖಾ ಕಮಿಟಿ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಪಂದ್ಯಾವಳಿಗೆ ಸೂಕ್ತ ವ್ಯವಸ್ಥೆ ಇಲ್ಲಎಂದು ವರದಿ ನೀಡಿದೆ. ಸೂಕ್ತ ವ್ಯವಸ್ಥೆ ಮಾಡಿದ ಬಳಿಕ ಪಂದ್ಯದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.
15 ವರ್ಷಗಳ ಬಳಿಕ ವಿಜಯ್ ಹಜಾರೆ ಪಂದ್ಯ ಆಯೋಜನೆಗೊಂಡಿದ್ದು, ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ ಎಂದು ಹೇಳಲಾಗಿತ್ತು. ಈ ನಿಟ್ಟಿನಲ್ಲಿ ವಿರಾಟ್ ಕೊಹ್ಲಿ ಹಾಗೂ ಇತರ ಆಟಗಾಗರು ಈಗಾಗಲೇ ಚಿನ್ನಸ್ವಾಮಿ ಸ್ಟೆಡಿಯಂಗೆ ಆಗಮಿಸಿ ಪ್ರಾಕ್ಟೀಸ್ ಆರಂಭಿಸಿದ್ದರು. ಆದರೆ ಈಗ ಕೊನೇ ಕ್ಷಣದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಅವಕಾಶವಿಲ್ಲ ಎಂದು ತಿಲಿದುಬಂದಿದೆ.


