Karnataka News

BREAKING: ಕಾಲ್ತುಳಿತ ದುರಂತ: ಪ್ರಕರಣ CID ತನಿಖೆಗೆ ವರ್ಗಾವಣೆ ಮಾಡಿ ಅಧಿಕೃತ ಆದೇಶ

ಪ್ರಗತಿವಾಹಿನಿ ಸುದ್ದಿ: ಕಾಲ್ತುಳಿತ ಘಟನೆಯಲಿ 11ಜನರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಡಿಜಿ & ಐಜಿಪಿ ಕಚೇರಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Related Articles

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಬೆಂಗಳೂರು ನಗರ ಕಮಿಷ್ನರ್ ಬಿ.ದಯಾನಮ್ದ್ ಸೇರಿದಂತೆ ಹಲವು ಪೊಲೀಸರನ್ನು ಅಮಾನತುಗಿಳಿಸಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆ ಹಾಗೂ ಸಿಐಡಿ ತನಿಖೆಗೆ ಆದೇಶ ನೀಡಿದೆ.

Home add -Advt


Related Articles

Back to top button