Latest

ಜೀಪ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ; 6 ಜನ ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಿಂತಾಮಣಿ: ಜೀಪ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿಯಲ್ಲಿ ನಡೆದಿದೆ.

ಜೀಪಿನಲ್ಲಿ 12ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಜೀಪ್ ಎದುರಿನಿಂದ ಬಂದ ಸಿಮೆಂಟ್ ಕ್ಯಾಂಟರ್ ಗೆ ಡಿಕ್ಕಿಹೊಡೆದಿದೆ. ಪರಿಣಾಮ ಈ ದುರಂತ ಸಂಭವಿಸಿದ್ದು, ಜೀಪಿನಲ್ಲಿದ್ದ 6 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೋಲಾರ ಹಾಗೂ ಚಿಂತಾಮಣಿ ತಾಲೂಕು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜೀಪ್ ಹಾಗೂ ಕ್ಯಾಂಟರ್ ಎರದು ವಾಹನಗಳ ಅತಿಯಾದ ವೇಗ ಹಾಗೂ ಚಾಲಕರ ಅಜಾಗರುಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ
ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button