Latest

ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನೆರವೇರಲಿದೆ ಚಿರು ಸರ್ಜಾ ಅಂತ್ಯಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತಿ ಕಿರೀಯ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದ ಬಳಿ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.

ತುಮಕೂರಿನ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ನಿರ್ಧರಿಸಿದ್ದರು. ತಾತ ಶಕ್ತಿ ಪ್ರಸಾದ್​ ಅವರ ಸಮಾಧಿ ಪಕ್ಕದಲ್ಲೇ ಚಿರು ಸರ್ಜಾ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎನ್ನಲಾಗಿತ್ತು. ಆದರೆ, ಇದೀಗ ತುಮಕೂರಿನ ಬದಲಾಗಿ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದ ನೆಲಗುಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಧ್ರುವ ಸರ್ಜಾ ಕೋರೊಕೆಯಂತೆ ಅಣ್ಣ ಚಿರು ಎಂದಿಗೂ ತನ್ನೊಂದಿಗೇ ಇರಬೇಕು ಹಾಗಾಗಿ ನೆಲಗುಳಿ ಗ್ರಾಮದಲ್ಲಿರುವ ತನ್ನ ಫಾರ್ಮ್ ಹೌಸ್ ನಲ್ಲೇ ಚಿರು ಸರ್ಜಾ ಅವರ ಅಂತ್ಯಕ್ರಿಯೆ ನಡೆಯಬೇಕು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಮಧ್ಯಾಹ್ನ 1:30ರವರೆಗೆ ಚಿರು ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಬೆಂಗಳೂರಿನ ಕೆ.ಆರ್. ರಸ್ತೆಯಲ್ಲಿರುವ ಚಿರು ಸರ್ಜಾ ಅವರ ಮನೆಯಿಂದ ಮೃತದೇಹವನ್ನು ತೆರೆದ ವಾಹನದಲ್ಲಿ ಫಾರ್ಮ್ ಹೌಸ್​ಗೆ ತೆಗೆದುಕೊಂಡು ಹೋಗಲಾಗುವುದು. ಸಂಜೆ4 ಗಂಟೆ ನಂತರ ಅಂತ್ಯ ಸಂಸ್ಕಾರ ನೆರವೇರಲಿದೆ.

Home add -Advt

Related Articles

Back to top button