*ಚಿತ್ರದುರ್ಗದಲ್ಲಿ ಬಸ್ ದುರಂತ ಪ್ರಕರಣ: ಸಾವಿನ ಸಂಖ್ಯೆ ಬಗ್ಗೆ ಖಚಿತ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ಲಾರಿ ಹಾಗೂ ಸೀಬರ್ಡ್ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹಲವರು ಸಜೀವದಹನವಾಗಿದ್ದು, ಮೃತರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ನಿಖರ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಲಾರಿ ಸೀಬರ್ಡ್ ಬಸ್ ಗೆ ಗುದ್ದಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಸಾವನ್ನಪ್ಪಿದ್ದಾರೆ. ಕೆಲವರು ನಾಪತ್ತೆಯಾಗುದ್ದು, ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಪಿ ರಂಜಿತ್ ಕುಮಾರ್, ಬಸ್ ದುರಂತದಲ್ಲಿ ಲಾರಿ ಚಾಲಕ ಸೇರಿ ೬ ಜನರು ಸಾವನ್ನಪ್ಪಿದ್ದಾರೆ. ಆರು ಜನರ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಕೆಲ ಮೃತದೇಹಗಳ ಗುರುತನ್ನು ಕುಟುಂಬ ಇನ್ನೂ ಸ್ಪಷ್ಟವಾಗಿ ಗುರುತಿಸಿಲ್ಲ. ತನಿಖೆ ನಡೆಯುತ್ತಿದೆ ಎಂದರು.
ಮಾನಸ, ಬಿಂದು, ರಶ್ಮಿ, ನವ್ಯಾ, ಮಗು ಗ್ರೇಯಾ, ಲಾರಿ ಚಾಲಕ ಕುಲದೀಪ್ ಸೇರಿದಂತೆ ಆರು ಜನರ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.


