Kannada NewsKarnataka NewsLatest

*ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಕೋಟಿ ಹಣ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ನಡೆದಿದೆ.

ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದೆ. ಕಾರು ಚಾಲಕ ಸಚಿನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಈ ಹಣ ಅಡಿಕೆ ವ್ಯಾಪಾರಸ್ತರಿಬ್ಬರಿಗೆ ಸೇರಿದ್ದು ಎನ್ನಲಾಗಿದೆ. ಇನ್ನು ಈ ಬಗ್ಗೆ ಚಿತ್ರದುರ್ಗ ಎಸ್ ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದು, 8 ಕೋಟಿಯಷ್ಟು ಹಣ ಪತ್ತೆಯಾಗಿದ್ದು, ಕಾರು ಚಾಲಕನನ್ನು ವಿಚಾರಣೆ ನಡೆಸಲಾಗಿದೆ. ಪತ್ತೆಯಾದ ಹಣದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಿಚಾರಣೆ ಬಳಿಕ ಖಚಿತ ಮಾಹಿತಿ ತಿಳಿಯಲಿದೆ ಎಂದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button