Kannada NewsKarnataka NewsLatestPolitics
*ಚಿತ್ರದುರ್ಗದಲ್ಲಿ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ಬಸ್ ಅಪಘಾತ ಪ್ರಕರಣದಲ್ಲಿ ಹತ್ತು ಜನರು ಸಜೀವದಹನಗೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿಉರಿದಿದ್ದು, ದುರಂತದಲ್ಲಿ ಹತ್ತು ಜನರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.


