
ಪ್ರಗತಿವಾಹಿನಿ ಸುದ್ದಿ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40) ಹಾಗೂ 2 ವರ್ಷದ ಮಗು ಯಶಸ್ ಮೃತರು. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಫಣಿರಾಜ್, ರಶ್ಮಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಮದಕರಿಪುರಿ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ