ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ದ್ವಿಚಕ್ರವಾಹನಕ್ಕೆ ಆಟೋ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ರಂಗಸ್ವಾಮಿ (32) ದ್ವಿಚಕ್ರವಾಹನ ಸವಾರ ಎಂದು ಗುರುತಿಸಲಾಗಿದೆ.
ರಂಗಸ್ವಾಮಿ ಟಿವಿಎಸ್ ಎಕ್ಸಲ್ ನಲ್ಲಿ ವಾಹನದಲ್ಲಿ ಚಿತ್ರದುರ್ಗಕ್ಕೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಆಟೋ ಡಿಕ್ಕಿಯಾಗಿದೆ. ಪರಿಣಾಮ ರಂಗಸ್ವಾಮಿ ತಲೆಗೆ ತೀವ್ರವಾದ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ