Kannada NewsKarnataka NewsLatest

*ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ.

ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

2 ವರ್ಷದ ಸಿಂಧುಶ್ರೀ, 5 ತಿಂಗಳ ಹಯ್ಯಾಳಪ್ಪ, 3 ತಿಂಗಳ ಮಗು ರಕ್ಷಾ ಹಾಗೂ 26 ವರ್ಷದ ಲಿಂಗಪ್ಪಾ ಮೃತರು. ಕಾರಿನಲ್ಲಿದ್ದ ಯಲ್ಲಮ್ಮ (30), ಮಲ್ಲಮ್ಮ (20) ನಾಗಪ್ಪ (35) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button