
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಎಇಇ ಸೇರಿ ನಾಲ್ವರನ್ನು ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚಿತ್ರದುರ್ಗದ ನಗರಸಭೆಯ ಎಇಇ ಮಂಜುನಾಥ್ ಗಿರಡ್ದಿ, ಜೆಇ ಕಿರಣ್, ವಾಲ್ವ್ ಮ್ಯಾನ್ ಪ್ರಕಾಶಬಾಬು ಅಮಾನತುಗೊಂಡವರು. ಅಲ್ಲದೇ ಗುತ್ತಿಗೆ ಆಧಾರಿತ ನೌಕರ ನೀರಗಂಟಿ ಸುರೇಶ್ ರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದು, ನಿನ್ನೆವರೆಗೆ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಆಸ್ಪತ್ರೆಗೆಸೇರಿದ್ದ ಮತ್ತೋರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ