Latest

ಭೀಕರ ಅಪಘಾತ; ತುಂಡಾಗಿ ಬಿದ್ದ ವ್ಯಕ್ತಿಯ ರುಂಡ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯ ರುಂಡವೇ ತುಂಡಾಗಿ ಬಿದ್ದಿರುವ ಘೋರ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಒಂದು ಟ್ಯಾಂಕರ್ ಹಾಗೂ ಮತ್ತೊಂದು ಗೂಡ್ಸ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ವ್ಯಕ್ತಿಯ ರುಂಡ ತುಂಡಾಗಿ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button