
ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದಿಂದ ಪತಿ ಮಹಾಶಯ ಪತ್ನಿಯ ತಲೆ ಮೇಲೆ ದೊಣ್ಣೆಯಿಂದ ಹೊಡೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಮತಾ (45) ಕೊಲೆಯಾದ ಮಹಿಳೆ. ರವಿಕುಮಾರ್ ಪತ್ನಿಯನ್ನೇ ಕೊಲೆಗೈದ ಗಂಡ. ಆರೋಪಿ ರವಿ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ.
ವಿಚಾರಣೆ ವೇಳೆ ಅಕ್ರಮ ಸಂಬಂಧದಿಂದಾಗಿ ಹತ್ಯೆ ಮಾಡಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




