ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಹೂವು,ತರಕಾರಿ ಬೆಳೆಗಾರರ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಸಿಎಂ ಭರವಸೆ ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ರೈತರಿಗೆ 13 ಸಾವಿರ ಕೋಟಿ ರೂಪಾಯಿ ಸಾಲವನ್ನು ನೀಡಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆ ಜಿಲ್ಲೆ,ರಾಜ್ಯಕ್ಕೆ ತರಕಾರಿ, ಹಣ್ಣು ಸಾಗಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೊರ ರಾಜ್ಯಕ್ಕೆ ಹಣ್ಣು, ತರಕಾರಿ, ಸರಬರಾಜು ಮಾಡುವ ಲಾರಿ ಪರೀಕ್ಷಿಸುವಂತಿಲ್ಲ ಎಂದರು.
ರೈತರ ಮುಂಗಾರು ಹಂಗಾಮಿಗೆ ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಲು ಹೊಸದಾಗಿ ಸಹಕಾರ ಬ್ಯಾಂಕುಗಳು ಹಾಗೂ ವ್ಯವಸಾಯ ಸೇವಾ ಸಹಕಾರ ಸೊಸೈಟಿಗಳಿಂದ ಸಾಲ ನೀಡಲು ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ಸಾಮೂಹಿಕ ನಮಾಜ್ ಮಾಡುವಂತಿಲ್ಲ ಎಂದು ಸರ್ಕಾರ ಕಟ್ಟುನಿಟ್ಟಾಗಿ ಆದೇಶಿಸಿದೆ. ರಂಜಾನ್ ವೇಳೆ ಮನೆಯಲ್ಲಿಯೇ ನಮಾಜ್ ಮಾಡಲು ಸೂಚಿಸಿದೆ. ತಬ್ಲಿಘಿ ಗೆ ಹೋಗಿ ಬಂದವರು ಕಡ್ಡಾಯವಾಗಿ ಚಿಕಿತ್ಸೆಗೆ ಒಳಪಡಬೇಕು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ