
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ದಿನಸಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸಜೀವವಾಗಿ ದಹನಗೊಂಡಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ (55) ಮೃತ ವ್ಯಕ್ತಿ. ಬೆಂಕಿ ಅವಘಡದಲ್ಲಿ ಪ್ರಕಾಶ್ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆ ಪಕ್ಕದಲ್ಲೇ ದಿನಸಿ ಅಂಗಡಿ ನಡೆಸುತ್ತಿದ್ದ ಪ್ರಕಾಶ್ ಇಂದು ಮುಂಜಾನೆ ಎಂದಿನಂತೆ ಅಂಗಡಿ ಬಾಗಿಲು ತೆರೆದು ವ್ಯಾಪಾರಕ್ಕೆ ಮುಂದಾಗಿದ್ದಾರೆ ಈ ವೇಳೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಕಿರಾಣಿ ಸಾಮಾನುಗಳು ಸುಟ್ಟು ಕರಕಲಾಗಿವೆ. ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಪೊಲಿಸ್ ಫೈರಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ