Latest

ಸಚಿವ ಬಿ.ಶ್ರೀರಾಮುಲು ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಸಚಿವ ಶ್ರೀರಾಮುಲು ಅವರಿಗೆ ಮನವಿ ಪತ್ರ ಸಲ್ಲಿಸಲು ಬಂದ ಸ್ವಾಮೀಜಿ ಸಚಿವರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದೆ.

ಶರಣರ ಸುಜ್ಞಾನ ಮಠದ ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ. ಹಣಬಲ ಹಾಗೂ ಅಧಿಕಾರ ಬಲದಿಂದ ತನಗೆ ಮಠದ ಪೀಠಾಧಿಕಾರವನ್ನು ಕೆಲವರು ತಪ್ಪಿಸಿದ್ದಾರೆ ಎಂದು ಆರೋಪಿಸಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲು ಬಿಜೆಪಿ ಕಚೇರಿಗೆ ಬಂದ ಸ್ವಾಮೀಜಿ, ಸಚಿವರನ್ನು ಭೇಟಿಯಾಗಿ ಅವರ ಮುಂದೆಯೇ ವಿಷ ಸೇವಿಸಿದ್ದಾರೆ.

ತಕ್ಷಣ ಸ್ವಾಮೀಜಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button