Latest

*ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮುಖಂಡರಾದ ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ ಹಾಗೂ ಅರವಿಂದ್ ಚೌಹಾಣ್ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಇನ್ನೊಂದೆಡೆ ದಾವಣಗೆರೆಯಲ್ಲಿ ಎಂ.ಪಿ.ರೇಣುಕಾಚಾರ್ಯ ಆಪ್ತ ಡಾ.ಡಿ.ಬಿ.ಗಂಗಪ್ಪ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

https://pragati.taskdun.com/karnatakarainalertimd/


Related Articles

Back to top button