Latest

ವೈದ್ಯರ ಎಡವಟ್ಟು; ಜೀವಂತವಿರುವ ವ್ಯಕ್ತಿಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಸಿಬ್ಬಂದಿ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಆಸ್ಪತ್ರೆ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಮಹಾಲಿಂಗಪುರದ ಶಂಕರ ಗೊಂಬಿ ಎಂಬಾತ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬದುಕುವ ಸಾಧ್ಯತೆ ಕಡಿಮೆಯಿದ್ದು, ವೆಂಟಿಲೇಟರ್ ಅಳವಡಿಸಿ ಅಂಬುಲೆನ್ಸ್ ಮೂಲಕ ವೈದ್ಯರು ಶಂಕರ್ ನನ್ನು ವಾಪಸ್ ಮನೆಗೆ ಕಳುಹಿಸಿದ್ದರು. ಮಾರ್ಗಮಧ್ಯೆ ಶಂಕರ್ ಸಾವನ್ನಪ್ಪಿದ್ದಾನೆಂದು ಭಾವಿಸಿ ಕುಟುಂಬದವರು ಮಹಾಲಿಂಗಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.

Home add -Advt

ಶಂಕರ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಗೆ ಮುಂದಾಗುತ್ತಿದ್ದಂತೆ ವ್ಯಕ್ತಿಯ ಕೈ, ಕಾಲು ಅಲುಗಾಡಲು ಶುರುವಾಗಿದೆ. ವಿಷಯ ತಿಳಿದ ವೈದ್ಯರು ತಪಾಸಣೆ ನಡೆಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಂಕರ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

Related Articles

Back to top button