ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ನೀರು ಶುದ್ದೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆ ಘಟನೆಗೆ ಸಂಬಂಧಿಸಿ ಅಸ್ವಸ್ಥರ ಸಂಖ್ಯೆ 100ಕ್ಕೂ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಸಮೀಪ ನಿನ್ನೆ ಸಂಜೆ 6 ಗಂಟೆಗೆ ಈ ಅವಘಡ ಸಂಭವಿಸಿದಾಗ, ದಿಢೀರ್ ಆಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು. ಸುಮಾರು ಒಂದು ಕಿ.ಮೀ. ವರೆಗೆ ಹೊಗೆ ಆವರಿಸಿತ್ತು. ಇದರಿಂದ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ.
ಅದೃಷ್ಟವಶಾತ್ ಈವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಸ್ಥಳಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ