Belagavi NewsBelgaum NewsCrimeKannada NewsKarnataka News

*ಶಿವಾನಂದ ನಿಲಣ್ಣವರ ಅವರನ್ನು ಬೆಳಗಾವಿಗೆ ಕರೆತಂದ ಸಿಐಡಿ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾವಿರಾರು ಜನರಿಂದ ಹಣ ಸಂಗ್ರಹಿಸಿ 4,500 ಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆ ಮುಖ್ಯಸ್ಥ ಶಿವಾನಂದ ನೀಲಣ್ಣವರನನ್ನು ಸಿಐಡಿ ಅಧಿಕಾರಿಗಳು ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕರೆತಂದಿದ್ದಾರೆ.

ನ್ಯಾಯಾಲಯವು ನೀಡಿದ್ದ 10 ದಿನಗಳ ಸಿಐಡಿ ಕಸ್ಟಡಿ ಅವಧಿ ಮೇ 27ರಂದು ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸಲು ಬೆಳಗಾವಿಗೆ ಕರೆತರಲಾಗಿದೆ.

Home add -Advt

ಬುಧವಾರ ನ್ಯಾಯಾಲಯಕ್ಕೆ ರಜೆ ಇರುವ ಕಾರಣ ಮಂಗಳವಾರವೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿಐಡಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೀಲಣ್ಣವರ್ ಪತ್ನಿ ನಟ ಆರ್. ಅಭಿಲಾಷ್ ಹಾಗೂ ವ್ಯವಹಾರ ಪಾಲುದಾರ ಸುಭಾಷ್ ಅವರಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಮೂವರಿಗೂ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮಾಳಮಾರುತಿ ಠಾಣೆಯಲ್ಲಿ ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದು, ಅವರಿಂದಲೂ ಮಹತ್ವದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ಹೂಡಿಕೆದಾರರ ಹಣ ಬಳಸಿ ಖರೀದಿಸಲಾಗಿದೆ ಎನ್ನಲಾದ ಐಷಾರಾಮಿ ವಾಹನಗಳ ಜಪ್ತಿಗೂ ಮುಂದಾಗಿದೆ. 

ಕೋಟ್ಯಂತರ ರೂಪಾಯಿ ಮೌಲ್ಯದ ಡಿಫೆಂಡರ್, ಮರ್ಸಿಡಿಸ್ ಬೆಂಝ್ ಹಾಗೂ ವೆಲ್‌ಫೈರ್ ಕಾರುಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ.

Related Articles

Back to top button