ಪ್ರಗತಿವಾಹಿನಿ ಸುದ್ದಿ, ಮುಂಬೈ – ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆ ಜಿಗಿದು ಒಳಬಂದ ಅನುಮಾನಾಸ್ಪದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂಧಿ ಬಂಧಿಸಿದ್ದಾರೆ.
೨೧ ವರ್ಷದ ಯುವಕ ಶುಕ್ರವಾರ ರಾತ್ರಿ ೧೨ ಗಂಟೆ ಸುಮಾರಿಗೆ ಕುರ್ಲಾ ಕಡೆಯಿಂದ ವಿಮಾನ ನಿಲ್ದಾಣದ ಗೋಡೆ ಜಿಗಿದು ಒಳಗೆ ಹಾರಿದ್ದ. ಗಸ್ತು ತಿರುಗುತ್ತಿದ್ದ ಸಿಐಎಸ್‌ಎಫ್ ಸಿಬ್ಬಂದಿ ತಕ್ಷಣ ಆತನನ್ನು ಸುತ್ತುವರೆದು ವಶಕ್ಕೆ ಪಡೆದಿದ್ದಾರೆ. ಬಳಿಕ ಮುಂಬೈ ಶಹರ್ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ತಾಜ್ ಹೊಟೇಲ್‌ನಲ್ಲಿ ನಡೆದ ಉಗ್ರಹರ ವಿದ್ವಂಸಕಾರಿ ಕೃತ್ಯದ ಬಳಿಕ ಮುಂಬೈನಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಂತಹ ಸೂಕ್ಷ್ಮ ಪ್ರದೇಶದಲ್ಲಿ ಅಪರಿಚಿತ ಯುವಕ ಗೋಡೆ ಹಾರಿ ಒಳಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚೀಫ್ ಸೆಕ್ಯುರಿಟಿ ಆಫೀಸರ್ ಶ್ರೀಕಾಂತ್ ಕಿಶೋರ್ ಅವರು ಘಟನೆಯ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ್ದಾರೆ. ರಾತ್ರಿ ೧೨ ಗಂಟೆಯ ವೇಳೆಗೆ ಗೋಡೆ ಹಾರಿ ಬಂದ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು ಪೊಲೀಸರಿಗೆ ಒಪ್ಪಿಸಲಾಗಿದೆ. ಅಲ್ಲದೇ ಪೊಲೀಸರು ಮತ್ತು ಕೇಂದ್ರೀಯ ಭದ್ರತಾ ಪಡೆಯ ಅಧಿಕಾರಿಗಳು ಜಂಟಿ ವಿಚಾರಣೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
13 ವರ್ಷದ ಬಾಲಕನಿಗೆ ಅಶ್ಲೀಲ ಮೆಸೇಜ್ : ಫೇಸ್‌ಬುಕ್ ಮಾಜಿ ಅಧಿಕಾರಿ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ