*ನಿಷೇಧಾಜ್ಞೆ ನಡುವೆಯೂ ಬ್ಯಾರಿಕೇಡ್ ಮುರಿದು ಜಂತರ್-ಮಂತರ್ ಗೆ ನುಗ್ಗಿದ ಸಿಜೆಪಿ ನಾಯಕರು*: *ಸೌರವ್ ದಾಸ್, ರಾಂಕಾ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಪ್ರತಿಭಟನೆಗೆ ಪೊಲೀಸರ ಬಿಗಿ ಭದ್ರತೆ ಹಾಗೂ ನಿರ್ಬಂಧಿತ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು ಅವುಗಳನ್ನು ಲೆಕ್ಕಿಸದೆ ಜಂತರ್ ಮಂತರ್‌ನೊಳಗೆ ಸಿಜೆಪಿ ಪ್ರತಿಭಟನಾಕಾರರು ನುಗ್ಗಿದ್ದಾರೆ.
ಜಂತರ್-ಮಂತರ್ ಬಳಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಯಾವುದನ್ನೂ ಗಣನೆಗೆ ತೆಗೆದುಕ್ಳ್ಳದ ಸಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ಜಂತರ್ ಮಂತರ್ ಒಳಗೆ ನುಗ್ಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದಾರೆ.
ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ನಾಯಕರು ಮತ್ತೆ ಪ್ರತಿಭಟನಾ ಸ್ಥಳಕ್ಕೆ ಲಗ್ಗೆ ಇಟ್ಟಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಗೃಹ ಸಚಿವಾಲಯವು ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ರದ್ದುಗೊಳಿಸಿ, ಸುತ್ತಮುತ್ತ ಸೆಕ್ಷನ್ 163 (ಹಿಂದಿನ ಸೆಕ್ಷನ್ 144) ಜಾರಿಗೊಳಿಸಿತ್ತು. ಆದಾಗ್ಯೂ, ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ಪೊಲೀಸರ ಮೊದಲ ಸುತ್ತಿನ ಬ್ಯಾರಿಕೇಡ್‌ಗಳನ್ನು ತಳ್ಳಿ ನಿಷೇಧಿತ ಪ್ರದೇಶಕ್ಕೆ ನುಗ್ಗಿದರು.
ತಕ್ಷಣವೇ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ (RAF) ಇಬ್ಬರೂ ನಾಯಕರನ್ನು ಬಲವಂತವಾಗಿ ವಶಕ್ಕೆ ಪಾಡೆದು ಪೊಲೀಸ್ ವ್ಯಾನ್‌ಗೆ ಎತ್ತಿ ಹಾಕಿ ಅಪರಿಚಿತ ಪೊಲೀಸ್ ಠಾಣೆಗೆ ಕರೆದೊಯ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



