Karnataka NewsLatestNational

*ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ನೀಟ್ ಹಗರಣ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆ ದೆಹಲಿಯ ಜಂತರ್ ಮಂತರ್ ನಲ್ಲಿ ತೀವ್ರಗೊಂಡಿದೆ. ನಿರ್ಬಂಧ ವಿಧಿಸಿದರೂ ಸಂಸತ್ ಚಲೋ ಮೂಲಕ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ/

ಕಾಕ್ರೋಚ್ ಜನತಾ ಪಕ್ಷ ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ ‘ಚಲೋ ಸಂಸದ್’ ಮೆರವಣಿಗೆ ಸಂಬಂಧ ದೆಹಲಿ ಪೊಲೀಸರಿಗೆ ಯಾವುದೇ ಅನುಮತಿ ಕೋರಿ ಅರ್ಜಿ ನೀಡಿಲ್ಲ. ಪ್ರತಿಭಟನಾ ಮೆರವಣಿಗೆಗಾಗಿ ಸಂಘಟನೆಯಿಂದ ಯಾವುದೇ ಅನುಮತಿಯನ್ನು ಕೋರಿಲ್ಲ ಅಥವಾ ಪೊಲೀಸ್ ಆಡಳಿತದಿಂದ ಅಂತಹ ಯಾವುದೇ ಅನುಮತಿಯನ್ನು ನೀಡಲಾಗಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನುಮತಿಯಿಲ್ಲದೆ ಬೀದಿಗಿಳಿಯುವ ಪ್ರತಿಭಟನಾಕಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದರು.

ಆದಾಗ್ಯೂ ಇಂದು ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯೀಜಿಸಿದ್ದರು. ಪ್ರತಿಭಟನಾ ಸ್ಥಳ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ಕೂಡ ಆಗಮಿಸಿದ್ದರು. ಪ್ರತಿಭಟನಾಕರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಂಸತ್ ಚಲೋಗೆ ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಡೆ ಹಿಡಿದಿದ್ದಾರೆ. ಈ ವೇಳೆ ಹೋರಾಟಗಾರರು ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸದ್ಯ ಜಂತರ್ ಮಂತರ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button