Belagavi NewsBelgaum NewsCrimeKannada NewsKarnataka NewsLatest
*ಬೆಳಗಾವಿಯಲ್ಲಿ ಗಣೇಶ ಮೆರವಣಿಗೆ ವೇಳೆ ಯುವಕರ ಹೊಡೆದಾಟ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಡ ಗ್ರಾಮದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ತಡರಾತ್ರಿ ನಡೆದಿದೆ.
ಗಲಾಟೆಯಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಾಡ ಗ್ರಾಮದಲ್ಲಿ ಗಣೇಶ ಮೂರ್ತಿ ತರುವ ವೇಳೆ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಗಲಾಟೆ ಹಾಗೂ ಹೊಡೆದಾಟ ನಡೆದಿದೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗಲಾಟೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕ ಗಲಾಟೆಗೆ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.




