Belagavi NewsBelgaum NewsCrimeKannada NewsKarnataka News
*ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಬಾಲಕನೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ಕಲಕುವ ಘಟನೆಯೊಂದು ನಡೆದಿದೆ.
ನಿಪ್ಪಾಣಿಯ ಮಾನೆ ಪ್ಲಾಟ್‌ನ ಆಜಾದ್ ಗಲ್ಲಿಯಲ್ಲಿ ವಾಸವಿದ್ದ ಸಾದ್ ವಾಸಿಂ ಬಾಗವಾನ್ ಎಂಬ ವಿದ್ಯಾರ್ಥಿ ಹಗ್ಗದಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಘಟನೆ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ನಡೆದ ಸ್ಥಳಕ್ಕೆ ನಿಪ್ಪಾಣಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.



