ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುತೂಹಲ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಪ್ರಬಲ ಆಕಾಂಕ್ಷಿಗಳಲ್ಲೊಬ್ಬರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇನ್ನು ಸ್ವಲ್ಪ ಹೊತ್ತಿನಲ್ಲೇ ದೆಹಲಿಗೆ ಹೊರಡಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಜವಾಬ್ದಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಹಾಕಲಾಗಿದೆ. ಈ ಕುರಿತು ಒಂದು ಸಾಲಿನ ನಿರ್ಣಯವನ್ನು ಎಲ್ಲ 135 ಶಾಸಕರು ಸೇರಿ ತೆಗೆದುಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ, ರಾಹುಲ ಗಾಂಧಿಯವರೊಂದಿಗೆ ಚರ್ಚಿಸಿ, ಶಾಸಕರೊಂದಿಗೂ ಸಮಾಲಚನೆ ನಡೆಸಿ ನಿರ್ಧಾರ ಪ್ರಕಟಿಸಬೇಕಿದೆ.
ಈಗಾಗಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಗೆ ತೆರಳಿದ್ದಾರೆ. ಡಿ.ಕೆ.ಶಿವಕಾಮಾರ ಸಹ ನಿನ್ನೆಯೇ ದೆಹಲಿಗೆ ಹೋಗಬೇಕಿತ್ತು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಅವರು ಹೋಗಲಿಲ್ಲ. ಇದೀಗ ದೇವನಳ್ಳಿ ವಿಮಾನ ನಿಲ್ದಾಣದಿಂದ 9.50ರ ವಿಸ್ತಾರ ವಿಮಾನದಲ್ಲಿ ಹೊರಡಲಿದ್ದಾರೆ.
ದೆಹಲಿಗೆ ಒಬ್ಬನೇ ಬರುವಂತೆ ತಿಳಿಸಿದ್ದಾರೆ. ಹಾಗಾಗಿ ಒಬ್ಬನೇ ಹೋಗುತ್ತಿದ್ದೇನೆ ಎಂದು ಶಿವಕುಮಾರ ತಿಳಿಸಿದ್ದಾರೆ. ದೆಹಲಿಗೆ ಹೊರಡುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು, ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ. ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ. ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ. ನಾನು ಒಬ್ಬನೇ ಹೋಗುತ್ತಿದ್ದೇನೆ. ಪ್ರಧಾನ ಕಾರ್ಯದರ್ಶಿ ಒಬ್ಬನೇ ಬರುವಂತೆ ಹೇಳಿದ್ದಾರೆ. ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ ಎಂದು ಅವರು ತಿಳಿಸಿದರು.
ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು.
ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ.
ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ.
ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ.
ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ.
ನಾನು ಒಬ್ಬನೇ ಹೋಗುತ್ತಿದ್ದೇನೆ.
ಒಬ್ಬನೇ ಬರುವಂತೆ ಪ್ರಧಾನ ಕಾರ್ಯದರ್ಶಿಯವರು ನನಗೆ ಸೂಚನೆ ಕೊಟ್ಟಿದ್ದಾರೆ.
ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ.
ನನ್ನ ಆರೋಗ್ಯ ಸುಧಾರಿಸಿದ್ದು, ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ.
ಜನ ನಮಗೆ ನೀಡಿರುವ ಆಶೀರ್ವಾದ, ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಉಳಿಸಿ ಬೆಳೆಸಿಕೊಂಡು ಹೋಗಲು ನಾವು ಶ್ರಮಿಸಬೇಕಿದೆ.
ನಾವು ಕಾನೂನು ಬದ್ಧವಾಗಿ ದೇಶದ ಸಂವಿಧಾನ ಉಳಿಸಲು, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಿಸಲು ರಾಜ್ಯದ ಜನತೆ ಹಾಗೂ ತಾಯಿ ಚಾಮುಂಡೇಶ್ವರಿ ಅವರ ಆಶೀರ್ವಾದ ಇರಲಿ.
ಹೈಕಮಾಂಡ್ ಬಳಿ ಸಿಎಂ ಸ್ಥಾನ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರು ನನ್ನನ್ನು ಏಕಾಂಗಿಯಾಗಿ ಬರಲು ತಿಳಿಸಿದ್ದು, ಹೀಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ’ ಎಂದಷ್ಟೇ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ