Kannada NewsKarnataka NewsLatestPolitics

*ನಾಳೆ ಕಾಂಗ್ರೆಸ್ ಶಾಸಕಂಗ ಪಕ್ಷದ ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂಡ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟ ಕೂಡ ವಿಸರ್ಜನೆಯಾಗಿದೆ. ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಿಟ್ಟಿನಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದು, ದೆಹಲಿಯಿಂದ ವಾಪಸಾದ ನಂತರ ಸಿಎಲ್​​ಪಿ ಸಭೆ ನಡೆಯಲಿದೆ. ನಾಳೆ ಮೇ 30 ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ.

ಸಭೆಯ ಬಗ್ಗೆ ಕೆಪಿಸಿಸಿಯಿಂದ ಕಾಂಗ್ರೆಸ್ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ಎಲ್ಲಾ ಶಾಸಕರು ಬೆಂಗಳೂರಿನಲ್ಲಿಯೇ ಇರುವಂತೆ ಸೂಚಿಸಲಾಗಿದೆ. ನಿರೀಕ್ಷೆಯಂತೆ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button