ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಎಐಸಿಸಿ ಮಾಧ್ಯಮ ಕಾರ್ಯದರ್ಶಿ ಜೈರಾಮ್ ರಮೇಶ್, ಸಚಿವರಾದ ಪರಮೇಶ್ವರ, ಕೆ ಜೆ ಜಾರ್ಜ್, ಎಚ್ ಕೆ ಪಾಟೀಲ್, ಕೆ ಎಚ್ ಮುನಿಯಪ್ಪ, ಎಂ. ಬಿ. ಪಾಟೀಲ್, ಬೋಸರಾಜ್, ಸತೀಶ್ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ, ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ