Kannada NewsKarnataka NewsLatest

*ಹೊಸ ಗ್ಯಾರಂಟಿ ಘೋಷಣೆ ಮಾಡಿದ ಪ್ರಿಯಾಂಕಾ ಗಾಂಧಿ; ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ಕೇವಲ 10 ದಿನಗಳು ಮಾತ್ರ ಬಾಕಿಯಿದ್ದು, ಮತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳು ಭಾರಿ ಕಸರತ್ತು ನಡೆಸಿದೆ. ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ನಾಲ್ಕು ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನಷ್ಟು ಮಹತ್ವದ ಘೋಷಣೆ ಮಾಡಿದೆ.

ಬೆಲಗಾವಿ ಜಿಲ್ಲೆಯ ಖಾನಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ ನಡೆಸಿರುವ ಪ್ರೊಯಾಂಕಾ ಗಾಂಧಿ ಹೊಸ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿಯೂಟ ತಯಾರಕರ ವೇತನ ಹೆಚ್ಚಳ ಮಾಡುವ ಭರವಸೆ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 10,000 ವೇತನ, ಆಶಾ ಕಾರ್ಯಕರ್ತೆಯರಿಗೆ 8,000 ವೇತನ ಹೆಚ್ಚಳ ಹಾಗೂ ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತೆಯರಿಗೆ 5,000ವೇತನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

ಅಲ್ಲದೇ ನಿವೃತ್ತಿ ಹೊಂದಿದ ಅಥವಾ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಪರಿಹಾರಧನವಾಗಿ 3 ಲಕ್ಷ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ.

Home add -Advt
https://pragati.taskdun.com/bjp-ready-to-attack-lokayukta-it-on-50-state-leaders-along-with-belgaum-trio-mla-lakshmi-hebbalakas-allegation/
https://pragati.taskdun.com/pm-narendra-modicongress85-commissionkolara/


Related Articles

Back to top button