Kannada NewsKarnataka NewsLatestPolitics

*ಇಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.

ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಶಾಸಕರು ಸಚಿವರ ವಿರುದ್ಧ ಅಸಮಾಧಾನಗೊಂಡು ದೂರು ನೀಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತುರ್ತಾಗಿ ಶಾಸಕಾಂಗ ಸಭೆ ಕರೆಯಲಾಗಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆ ಮಹತ್ವ ಪಡೆದುಕೊಂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button