Kannada NewsKarnataka NewsNationalPolitics

*ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಸಿಎಂ ಜೊತೆ ಚರ್ಚೆ: ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ ಬಂದಿದೆ. ಈ ಕುರಿತು ಸಿಎಂ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ತುಮಕೂರಿನ ಸಿದ್ದಗಂಗಾಮಠದಲ್ಲಿ ಇವತ್ತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಟ್ಟರೇ ಶಾಶ್ವತವಾಗಿರುತ್ತೆ, ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ಸೋಮಣ್ಣ ಕೂಡ ಮನವಿ ಮಾಡಿದ್ದಾರೆ.

ಶ್ರೀಗಳ ಹೆಸರಿಡಲು ಕೇಂದ್ರದಿಂದ ಒಪ್ಪಿಗೆ ಸಿಗಗಬೇಕು. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ. ಸಾರ್ವಜನಿಕ ಸ್ಥಳಗಳಿಗೆ ಹೆಸರಿಡಬೇಕಾದರೆ ಪ್ರೊಸಿಜ‌ರ್ ಇರುತ್ತೆ, ಪ್ರಸ್ತಾವನೆಗಳು ಬಂದಾಗ ಸಾಧಕ ಬಾಧಕ ನೋಡಬೇಕಾಗುತ್ತೆ, ಎಲ್ಲವನ್ನೂ ಪರಿಶೀಲಿಸಿದ ಬಳಿಕ ಪ್ರೊಸಿಜರ್ ಆಗಬೇಕಲ್ಲ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button