
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಿತ್ತೂರು ಅರಮನೆ ಮಾದರಿ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆಯಾದ ಅನುದಾನಕ್ಕೆ ಕಿತ್ತೂರು ಅರಮನೆಯ ಅವಶೇಷಗಳನ್ನು ಆಧರಿಸಿ ಅರಮನೆ ಮಾದರಿಯಲ್ಲಿಯೇ ಪ್ರತಿರೂಪವನ್ನು ನಿರ್ಮಿಸಲು ತಯಾರಿಸಿದ ನೀಲಿನಕ್ಷೆ, ಗಡಾದ ಮರಡಿಯಲ್ಲಿ ದ್ವಜ ಸ್ಥಂಭ ನಿರ್ಮಾಣ, ಸಿ.ಸಿ ಕ್ಯಾಮೆರಾ ಅಳವಡಿಕೆ, ಚೌಕಿಮಠದ ಗದ್ದುಗೆಗಳ ಅಭಿವೃದ್ಧಿ, ಸಭಾಭವನ ಹಾಗೂ ಪ್ರಾಧಿಕಾರ ಕಚೇರಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳ ಅನುಮೋದನೆ ಪಡೆಯಲಾಯಿತು.
ಈ ಸಭೆಯಲ್ಲಿ ಕಿತ್ತೂರಿನ ರಾಜಗುರು ಕಲ್ಮಠ ಶ್ರೀಗಳಾದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ಧಾರವಾಡ ಗ್ರಾಮೀಣ ಮತ ಕ್ಷೇತ್ರದ ಶಾಸಕ ಅಮೃತ ದೇಸಾಯಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಿನ್ನಪ್ಪ ಮುತ್ನಾಳ, ಉಳವಪ್ಪ ಉಳ್ಳಾಗಡ್ಡಿ, ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ