ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ಮತ್ತೆ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗಾಗಿ ಇಂದು ಮತ್ತು ನಾಳೆ ದೆಹಲಿಗೆ ತೆರಳಬೇಕಿದ್ದ ಸಿಎಂ ಬಿಎಸ್​ ಯಡಿಯೂರಪ್ಪ ದೆಹಲಿ ಭೇಟಿ ಮತ್ತೆ ರದ್ದಾಗಿದೆ. ವರಿಷ್ಠರ ಭೇಟಿಗೆ ಅವಕಾಶ ಸಿಗದ ಕಾರಣ ಯಡಿಯೂರಪ್ಪ ದೆಹಲಿ ಪ್ರವಾಸವನ್ನು ರದ್ದುಗೊಳಿಸಿ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಈಗಾಗಲೇ ಹಲವು ಬಾರಿ ದೆಹಲಿಗೆ ತೆರಳಲು ಸಿಎಂ ಬಿಎಸ್​ವೈ ಸಿದ್ಧತೆ ಮಾಡಿಕೊಂಡಿದ್ದರೂ ಹೈಕಮಾಂಡ್ ಸಮಯದ ಅಭಾವದಿಂದ ಭೇಟಿಗೆ ಅವಕಾಶ ನೀಡಿಲ್ಲ. ಅಲ್ಲದೇ, ಒಂದು ತಿಂಗಳು ಧನುರ್ಮಾಸ ಇದ್ದ ಕಾರಣ ಈ ಅವಧಿಯಲ್ಲಿ ಸಂಪುಟ ವಿಸ್ತರಣೆ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇದೀಗ ನಾಳೆಗೆ ಧನುರ್ಮಾಸ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಮುಂದಾಗಿದ್ದು, ಆದರೆ ಹೈಕಮಾಂಡ್ ಭೇಟಿಗೆ ಅವಕಾಶ ನೀಡುತ್ತಿಲ್ಲ.

ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡು ಒಂದುವರೆ ತಿಂಗಳಾಗುತ್ತಾ ಬಂದಿದ್ದರೂ ಸಂಪುಟ ವಿಸ್ತರಣೆ ಇನ್ನು ಸಾಧ್ಯವಾಗಿಲ್ಲ. ಸಂಪುಟ ವಿಸ್ತರಣೆ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಸಿದ್ಧರಾಗಿದ್ದರೂ, ಹೈಕಮಾಂಡ್ ಮಾತ್ರ ಒಪ್ಪಿಗೆ ನೀಡದಿರುವುದು, ಶಾಸಕರಲ್ಲಿ ಮತ್ತೆ ತಳಮಳ ಆರಂಭವಾಗಲು ಕಾರಣವಾಗಿದೆ.

 

Home add -Advt

Related Articles

Back to top button