ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರೀ ಮಳೆ, ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿದ್ದು, ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, ಜೊತೆಗೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ಹಾಗೂ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ವಾಸ್ತವಾಂಶ ಪರಿಶೀಲಿಸಲು ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಗೆ ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಅ.21ರಂದು ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ