ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ರದ್ದು ಮಾಡಿದ್ದು, ಆನ್ ಲೈನ್ ಮೂಲಕವೇ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆ.
ಸಿಎಂ ಯಡಿಯೂರಪ್ಪ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೀಗ, ಕೊರೋನಾ ಭೀತಿಯಿಂದಾಗಿ ಬೆಂಗಳೂರಿನಿಂದಲೇ ಆನ್ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲು ಮುಂದಾಗಿದ್ದಾರೆ.
ಇಂದು ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ಲೈನ್ ಮೂಲಕ ಭೂಮಿ ಪೂಜೆ ನೆರವೇರಿಸಲಿದ್ಧಾರೆ. ರಾಜ್ಯದ ವಿವಿಧ ಭಾಗಗಳ ಕಾರ್ಯಕ್ರಮಗಳನ್ನೂ ಸಿಎಂ ಆನ್ ಲೈನ್ ಮೂಲಕವೇ ಪರಿಶೀಲನೆ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ