ಹೌದು, ಸಂಜೆ ಬೆಳಗಾವಿಗೆ ಬರೋದ್ರೊಳಗೆ ಹೈಕಮಾಂಡ್ ಸಂದೇಶ ಬರುತ್ತೆ, ನಿಮಗೂ ತಿಳಿಯುತ್ತೆ -ಯಡಿಯೂರಪ್ಪ
ಬೆಳಗಾವಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ; ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿಎಂ ಬದಲಾವಣೆ ವಿಚಾರ, ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ಭೇಟಿ ನೀಡಿದ್ದು, ಪ್ರವಾಹ ಪರಿಸ್ಥಿತಿ ಕುರಿತು ಅವಲೋಕನ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಮಾಧ್ಯಮಗಳ ಜೊತೆ ಮಾತನಾಡಿದರು.
ಮುಖ್ಯಮಂತ್ರಿ ಸ್ಥಾನ ತೆರವು ಮಾಡುವ ವಿಷಯ ಸಬಂಧ ಕೇಳಿದಾಗ, ಸಂಜೆ ಪ್ರವಾಹ ಪೀಡಿತ ಪ್ರದೇಶಗಳಿಂದ ವಾಪಸ್ ಬರೋದ್ರೊಳಗೆ ಹೈಕಮಾಂಡ್ ಸಂದೇಶ ಬರುತ್ತದೆ. ನಿಮಗೂ ತಿಳಿಯುತ್ತದೆ ಎಂದು ಪ್ರತಿಕ್ರಿಯಿಸಿದರು.
ಸಂಜೆ ಹೊತ್ತಿಗೆ ಹೈಕಮಾಂಡ್ ಸಂದೇಶ ಬರುತ್ತದೆ. ಆ ನಂತರ ನಿಮಗೂ ತಿಳಿಯುತ್ತದೆ ಎಂದರು.
ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರಶ್ನಿಸಿದಾಗ, ಅದನ್ನು ಮಾಡುವವನು ನಾನಲ್ಲ, ಹೈಕಮಾಂಡ್ ಎಂದರು.
ಸ್ವಾಮೀಜಿಗಳು ತಮ್ಮ ಪರವಾಗಿ ಸಮಾವೇಶ ಮಾಡುತ್ತಿರುವ ಕುರಿತು ಪ್ರಶ್ನಿಸಿದಾಗ, ಅದು ಅಗತ್ಯವಿಲ್ಲ ಎಂದರು.
ಅಲ್ಲಿಂದ ಮೊದಲು ಸಂಕೇಶ್ವರಕ್ಕೆ ಭೇಟಿ ನೀಡಲಿದ್ದಾರೆ. ಸಂಕೇಶ್ವರದಲ್ಲಿ ಭಾರಿ ಮಳೆ, ಪ್ರವಾಹದ ಹೊಡೆತಕ್ಕೆ ಇಡೀ ಪಟ್ಟಣವೇ ನಲುಗಿ ಹೋಗಿದ್ದು, ಇಲ್ಲಿ ಮಳೆ ಹಾನಿ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಬಳಿಕ ಜಿಲ್ಲೆಯ ನಿಪ್ಪಾಣಿ, ಹುಕ್ಕೇರಿ ಸೇರಿದಂತೆ ಹಲವು ಪ್ರದೇಶಗಳಿಗೆ ಭೆಟಿ ನೀಡಿ ಮಳೆಯಿಂದ ಉಂಟಾದ ಹಾನಿ, ಜನರ ಸಂಕಷಗಳನ್ನು ಆಲಿಸಲಿದ್ದಾರೆ. ಸಿಎಂ ಯಡಿಯೂರಪ್ಪನವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಡಿಸಿಎಂ ಲಕ್ಷ್ಮಣ ಸವದಿ ಸಾಥ್ ನೀಡಿದ್ದಾರೆ.
ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ತಂದು ಚೆಲ್ಲಿದ ಶಾಸಕ ಅಭಯ ಪಾಟೀಲ (ವಿಡೀಯೋ ಸಹಿತ ವರದಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ