Kannada News

ಇಂದು ಬೆಳಗಾವಿ ಹಾಗೂ ಹುಬ್ಬಳ್ಳಿಗೆ ಭೇಟಿ ನಿಡಲಿರುವ ಸಿಎಂ ಬಿಎಸ್ ವೈ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಆತಂಕದ ನಡುವೆಯೂ ಶನಿವಾರದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಕೈಗೊಂಡಿದ್ದಾರೆ.

ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರು ಶನಿವಾರದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದರು. ವೈರಸ್​ ನಿಯಂತ್ರಣಕ್ಕೆ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮಾಲ್​, ಥಿಯೇಟರ್, ಶಾಲಾ-ಕಾಲೇಜುಗಳು ತೆರೆಯದಂತೆ ಆದೇಶ ಹೊರಡಿಸಿದೆ. ಈವರೆಗೂ ರಾಜ್ಯದಲ್ಲಿ ಆರು ಪ್ರಕರಣಗಳು ಪತ್ತೆಯಾಗಿದ್ದು, ಶಂಕಿತರ ಮೇಲೆ ನಿಗಾ ಇರಿಸಲಾಗಿದೆ.

ಏತನ್ಮಧ್ಯೆ ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಮಗಳ ಮದುವೆ ಸಮಾರಂಭದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Home add -Advt

Related Articles

Back to top button