ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ: ಸಿಎಂ

ಪ್ರಗತಿವಾಹಿನಿಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್​ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

Home add -Advt

ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ ರದ್ದಾಗಿರುವ ಕುರಿತು ಮಾತನಾಡಿದ ಅವರು, ಇಂದು ಮತ್ತು ನಾಳೆ ರಾಜ್ಯದ ಜಿಲ್ಲಾ ಪ್ರವಾಸ ಮಾಡುತ್ತಿದ್ದೇನೆ. ಹಲವು ಕಾರ್ಯಕ್ರಮ ಹಿನ್ನೆಲೆ ಪ್ರವಾಸವನ್ನು ಮೊಟಕುಗೊಳಿಸಲಾಗಿದೆ ಎಂದರು.

ಒಂದೆಡೆ 17 ಶಾಸಕರೂ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರೆ, ಇನ್ನೊಂದೆಡೆ ಬಿಜೆಪಿ ವರಿಷ್ಠರು ಸಿಎಂ ಭೇಟಿಗೂ ಅವಕಾಶ ನಿಡುತ್ತಿಲ್ಲ. ಒಟ್ಟಾರೆ ಯಡಿಯೂರಪ್ಪನವರಿಗೆ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.

Related Articles

Back to top button