ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆ ಫಲಿತಾಂಶ ಪ್ರಕಟವಾಗಿ ಹಲವು ದಿನಗಳೇ ಕಳೆದರೂ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಮೀನಾಮೇಷ ಎಣಿಸುತ್ತಿದ್ದಾರೆ. ಈ ನಡುವೆ ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗುತ್ತಿದ್ದು, 9 ಶಾಸಕರಿಗೆ ಮಂತ್ರಿ ಸ್ಥಾನ ದೊರೆಯುವುದು ಖಚಿತವಾಗಿದೆ.
ಉಪಚುನಾವಣೆಗೂ ಮೊದಲು ಗೆದ್ದ ಎಲ್ಲ ಅನರ್ಹರಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಯಡಿಯೂರಪ್ಪ ನೀಡಿದ್ದ ಭರವಸೆಯಲ್ಲಿ ಇದೀಗ ಬಾದಲಾವಣೆ ಕಂಡುಬಂದಿದ್ದು, ಗೆದ್ದ ಶಾಸಕರ ಪೈಕಿ 9 ಶಾಸಕರಿಗೆ ಮಾತ್ರ ಮಂತ್ರಿ ಪಟ್ಟ ನೀಡಲು ನಿರ್ಧರಿಸಿದ್ದಾರೆ.
ಈ ನಿಟ್ಟಿನಲ್ಲಿ ಜನವರಿ 12 ಅಥವಾ 13ರಂದು ಸಿಎಂ ಬಿಎಸ್ವೈ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈ ವೇಳೆ ತಮ್ಮ ಲೆಕ್ಕಾಚಾರವನ್ನು ಹೈಕಮಾಂಡ್ ಎದುರಿಡಲು ನಿರ್ಧಾರಿಸಿದ್ದಾರೆ.
ಉಪ ಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್, ಹೆಚ್ ವಿಶ್ವನಾಥ್ಗೆ ಸಚಿವ ಸ್ಥಾನ ಸಿಗುವುದು ಅನುಮಾನ. ಒಟ್ಟಾರೆ ಜ.18ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ