ಊಹಾಪೋಹಗಳಿಗೆ ಶಾಸಕರು ತಲೆಕೆಡಿಸಿಕೊಳ್ಳಬೇಕಿಲ್ಲ: ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕರು ಊಹಾಪೋಹಗಳಿಗೆ ತಲೆ ಕೆಡಿಸಿಕೊಳ್ಳಬಾರದು, ನಾನು ಕೊಟ್ಟ ಭರವಸೆ ಈಡೇರಿಸುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮಯ ಕೊಟ್ಟರೆ ನನ್ನ ಎಲ್ಲಾ ಪೂರ್ವನಿಗದಿತ ಕಾರ್ಯಕ್ರಮಗಳನ್ನು ರದ್ದುಮಾಡಿ ಇಂದು ರಾತ್ರಿಯೇ ಅವರನ್ನ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಅಂತಿಮ ಮಾಡುತ್ತೇನೆ. ಸಾಧ್ಯವಾದರೆ ಇಂದೇ ದೆಹಲಿಗೆ ಹೋಗುತ್ತೇನೆ ಎಂದರು.

ನಾನು ವಿದೇಶಕ್ಕೆ ಹೋಗುವ ಮುನ್ನ ಅಂದರೆ ದಾವೋಸ್ ಗೆ ತೆರಳುವ ಮುನ್ನ ರಾಜ್ಯ ಸಂಪುಟ ವಿಸ್ತರಣೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ.  ಅಮಿತ್ ಶಾ ದೆಹಲಿಗೆ ಬರಲು ಹೇಳಿದ್ದಾರೆ. ಇಂದು ಆಗದಿದ್ದರೂ 2-3 ದಿನದಲ್ಲಿ ಅಂತಿಮವಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕರು ಅನಗತ್ಯವಾಗಿ ತಲೆಕೆಡಿಸಿಕೊಳ್ಳಬೇಕಿಲ್ಲ. ನಮ್ಮ ಜತೆ ಬಂದವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ಭಾನುವಾರ ರಾತ್ರಿ ದೆಹಲಿಗೆ ಹೋಗಬೇಕಿತ್ತು. ಆದರೆ ದೇವದುರ್ಗದ ಕಾರ್ಯಕ್ರಮ ನಿಮಿತ್ತ ಸಾಧ್ಯವಾಗಲಿಲ್ಲ. ಶೀಘ್ರವೇ ಅಮಿತ್ ಶಾ ಅವರನ್ನ ಭೇಟಿಯಾಗುತ್ತೇನೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದೇ ಅಂತಿಮವಾಗುತ್ತದೆ ಎಂದರು.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button