99% ನಾಳೆ ಸಂಪುಟ ವಿಸ್ತರಣೆಯಾಗಲಿದೆ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರಕುತೂಹಲ ಕೆರಳಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ 99% ನಾಳೆ ಮಾಡಲಾಗುವುದು ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಂತಾಗಿದೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಜತೆ ಚರ್ಚಿಸಲು ಇಂದು ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ವರಿಷ್ಠರು ಇಂದೇ ಒಪ್ಪಿಗೆ ಸೂಚಿಸಿದರೆ ನಾಳೆ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

Home add -Advt

ಸಮಯ ನೋಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು. ದೆಹಲಿಯಿಂದ ನಾಳೆ ಬಂದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬುದರಲ್ಲಿ ತಮಗೆ ಶೇಕಡಾ 99ರಷ್ಟು ವಿಶ್ವಾಸವಿದೆ ಎಂದು ಹೇಳಿದರು.

Related Articles

Back to top button