Kannada NewsKarnataka News

ಖಾನಾಪುರ: ಮನೆ ಗೋಡೆ ಕುಸಿದು ಬಾಲಕನ ದುರ್ಮರಣ

 ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಕಳೆದೊಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೋಡೆ ಕುಸಿದು  ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ.

 

Home add -Advt

ಖಾನಾಪುರ ತಾಲೂಕಿನ ಲಿಂಗನಮಠ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚುಂಚವಾಡ ಗ್ರಾಮದ ಅನಂತು ಧರ್ಮೇಂದ್ರ ಪಾಶೆಟ್ಟಿ(15) ಎಂಬ ಬಾಲಕ ಮೃತಪಟ್ಟಿದ್ದಾನೆ.

 

ತಾನು ವಾಸಿಸುವ ಮನೆಯ ಪಕ್ಕದಲ್ಲಿರುವ ಮನೆಯಲ್ಲಿ ದನ ಕರುಗಳನ್ನು ಕಟ್ಟುತ್ತಿದ್ದರು. ಗುರುವಾರ  ರಾತ್ರಿ 10ಗಂಟೆ ಸುಮಾರಿಗೆ  ಕೊಟ್ಟಿಗೆಯಲ್ಲಿರುವ ದನ ಕರುಗಳಿಗೆ ಮೇವು ಹಾಕಲು ಹೋದಾಗ ಗೋಡೆ ಏಕಾಏಕಿ ಯುವಕನ ಮೇಲೆ ಕುಸಿದು ಬಿದ್ದಿರುವುದರಿಂದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

 

ಸುದ್ದಿ ತಿಳಿದ ತಕ್ಷಣ ರಾತ್ರಿಯೇ ಸ್ಥಳಕ್ಕೆ ನಂದಗಡ ಪೊಲೀಸ್ ಠಾಣೆಯ ಸಿಬ್ಬಂದಿ ದೌಡಾಯಿಸಿ ಮಾಹಿತಿಯನ್ನು ಸಂಗ್ರಹಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ತದನಂತರ ಯುವಕನ ಪ್ರಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲೆಗಳಿಗೆ 2 ದಿನ ರಜೆ

Related Articles

Back to top button