ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಈ ಬಾರಿಯ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವರಿಷ್ಠರ ಸಲಹೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಇಂದು ಅಥವಾ ನಾಳೆ ವರಿಷ್ಠರು ತೀರ್ಮಾನ ಹೇಳುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆಯಿದೆ. ನಿನ್ನೆಯೇ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಸಂಪುಟಕ್ಕೆ ಎಷ್ಟು ಜನರು ಸೇರುತ್ತಾರೆ ಎಂಬುದನ್ನು ಜೆ.ಪಿ.ನಡ್ಡಾ ಮತ್ತು ಪ್ರಧಾನಿಯವರು ಚರ್ಚಿಸಿ ಸೂಚನೆ ನೀಡಲಿದ್ದಾರೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಹುತೇಕ ಕೇಂದ್ರ ಸಚಿವರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೂ ಒಪ್ಪಿಗೆ ನೀಡುವ ಭರವಸೆಯಿದೆ ಎಂದು ಹೇಳಿದರು.
ಈ ಬಾರಿ 5 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದ್ದು, ಉಮೇಶ್ ಕತ್ತಿ, ಸುನೀಲ್ ಕುಮಾರ್,ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್ ಶಂಕರ್ ಸಂಭಾವ್ಯರು ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ