
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆಯಲ್ಲಿ ಸೋತವರಿಗೆ ಸಚಿವಸ್ಥಾನದ ಪ್ರೆಶ್ನೆಯೇ ಇಲ್ಲ ಎಂದು ಹೆಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ದಾವೋಸ್ ನಿಂದ ವಾಪಸ್ ಆದ ಸಿಎಂ ಯಡಿಯೂರಪ್ಪ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರೆಶ್ನೆಯಿಲ್ಲ ಎಂದರು.
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಮಯಾವಕಾಶ ಸಿಕ್ಕರೆ ಅವರೊಂದಿಗೆ ಮತ್ತೊಮ್ಮೆ ಮಾತನಾಡಲಾಗುವುದು. ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಆದರೆ ನಾಳೆ ಸಮಯ ಸಿಕ್ಕರೆ ಅವರ ಜೊತೆ ಚರ್ಚೆ ನಡೆಸಿ ಪ್ರಮಾಣವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ