Latest

ಮತ್ತೆ ದೆಹಲಿಗೆ ಹೊರಟ ಸಿಎಂ: ಮತ್ತೆ ಸಂಪುಟ ವಿಸ್ತರಣೆ ಕಸರತ್ತು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಗಡುವು ಮುಂದೂಡಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿ ಗೆದರಿದ್ದು, ಎರಡು ಮೂರು ದಿನಗಳಲ್ಲಿ ಮತ್ತೆ ದೆಹಲಿಗೆ ತೆರಳುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಆದರೆ ಎರಡು ಮೂರು ದಿನಗಳಲ್ಲಿ ಮತ್ತೆ ದೆಹಲಿಗೆ ಹೋಗುತ್ತಿದ್ದೇನೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿ ಬಂದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

Related Articles

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೀಗಾಗಿ ಸಿ.ಟಿ ರವಿ ಅವರಿಂದ ತೆರವಾಗುವ ಸ್ಥಾನಕ್ಕಾಗಿ ಸಚಿವಾಕಾಂಕ್ಷಿಗಳಿಂದ ಮತ್ತೆ ಲಾಬಿ ಆರಂಭವಾಗಿದೆ ಎನ್ನಲಾಗಿದೆ.

ಇನ್ನು ಸಿ.ಟಿ ರವಿಯಿಂದ ತೆರವಾಗುವ ಸಚಿವ ಸ್ಥಾನವಾದ ಪ್ರವಾಸೋದ್ಯಮ ಖಾತೆಯನ್ನು ಅರವಿಂದ ಲಿಂಬಾವಳಿಗೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಬಿಎಂಪಿ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಹಾಗೂ ದಲಿತ ನಾಯಕ ಎಂಬ ಮಾನದಂಡದ ಆಧಾರದ ಮೇಲೆ ಲಿಂಬಾವಳಿಗೆ ಸಚಿವ ಸ್ಥಾನ ನೀಡುವುದು ದಟ್ಟವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ, ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇದೆ ವೇಳೆ, ನಾಲ್ವರನ್ನು ಸಂಪುಟದಿಂದ ಕೈಬಿಟ್ಟು ಒಟ್ಟೂ 8 ಜನರನ್ನು ಹೊಸದಾಗಿ ಸೇರಿಸಿಕೊಳ್ಳಲಾಗುವುದು ಎನ್ನುವ ಸುದ್ದಿಯೂ ಹರಡಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button