ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ 10:30ಕ್ಕೆ ಆರಂಭವಾಗಲಿರುವ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳು ಪ್ರಕಟವಾಗುವ ನಿರೀಕ್ಷೆಯಿದೆ. ಪ್ರಮುಖವಾಗಿ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ