Latest

ವೀರಶೈವ-ಲಿಂಗಾಯತಕ್ಕೆ ಮೀಸಲಾತಿ; ಸಧ್ಯಕ್ಕೆ ಯಾವುದೇ ತೀರ್ಮಾನವಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಧ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುತ್ತಿಲ್ಲ ಎಂದು ಸ್ವತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸುವ ವಿಚಾರ ಮಹತ್ವದ್ದಾಗಿದೆ. ಹಾಗಾಗಿ ಇಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲ್ಲ. ಈ ವಿಚಾರದ ಜೊತೆಗೆ ಇನ್ನು ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿ, ಮತ್ತೊಮ್ಮೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚಿಸುತ್ತೇನೆ ಆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಒಟ್ಟಾರೆ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಬಗ್ಗೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ ಇನ್ನಷ್ಟು ಕಾನೂನು ಅಧ್ಯನದ ಅಗತ್ಯ ಹಿನ್ನೆಲೆಯಲ್ಲಿ ಸಧ್ಯಕ್ಕೆ ಈ ನಿರ್ಧಾರ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button