Latest

ನಾನು ಯಾವುದೇ ರೀತಿಯ ತುರ್ತು ಸಭೆಯನ್ನು ಕರೆದಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಬುಗಿಲೆದ್ದಿದ್ದು, ಈ ಹಿನ್ನಲ್ಲೆಯಲ್ಲಿ ಹಿರಿಯ ಶಾಸಕರನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿತ್ತು. ಆದರೆ ನಾನು ಯಾವುದೇ ತುರ್ತು ಸಭೆ ಕರೆದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಕೆಲವು ಶಾಸಕರೊಂದಿಗೆ ಚರ್ಚಿಸಲು ನಾನು ತುರ್ತು ಸಭೆ ಕರೆದಿದ್ದೇನೆ ಎನ್ನುವ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ಗಮನಿಸಿದ್ದೇನೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಅಂತಹ ಯಾವುದೇ ಸಭೆಯನ್ನು ನಾನು ಕರೆದಿಲ್ಲ ಎಂದು ತಿಳಿಸಿದ್ದಾರೆ.

Home add -Advt

ಉತ್ತರ ಕರ್ನಾಟಕ ಭಾಗದ ಶಾಸಕರಾದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಸ್ಥಾನಕ್ಕೆ ಬೀಡಿಕೆ ಇಡುವ ನಿಟ್ಟಿನಲ್ಲಿ ಗೌಪ್ಯ ಸಭೆಗಳನ್ನು ನಡೆಸಿದ್ದು, ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಾರೆ. ಈ ಹಿನ್ನಲೆಯಲ್ಲಿ ರೆಬಲ್ ಶಾಸಕರನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ ಎಂಬ ಸುದ್ದಿ ವರದಿಯಾಗಿತ್ತು.

ಬಿಜೆಪಿಯಲ್ಲಿ ಭಾರಿ ಭಿನ್ನಮತ: ಫೈನಲ್ ಎಚ್ಚರಿಕೆ ನೀಡಿದ ಕತ್ತಿ ಸಹೋದರರು

ರೆಬಲ್ ಶಾಸಕರಿಗೆ ಸಿಎಂ ಬುಲಾವ್

Related Articles

Back to top button